ಕೇರಳದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಇಲ್ಲಿ ಮತ್ತೆ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 292 ಹೊಸ ಕೋವಿಡ್ -19 ಸೋಂಕುಗಳು ಮತ್ತು ಮೂರು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.

ಇಂದು ಬೆಳಗ್ಗೆ 8 ಗಂಟೆಯವರೆಗೆ ದೇಶಾದ್ಯಂತ ವರದಿಯಾದ 341 ಕೋವಿಡ್ ಸೋಂಕುಗಳಲ್ಲಿ 292 ಕೇರಳದಿಂದ ಬಂದಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,041 ಕ್ಕೆ ತಲುಪಿದೆ ಎಂದು ಸಚಿವಾಲಯದ ವೆಬ್‍ಸೈಟ್ ತಿಳಿಸಿದೆ.































 
 

ಈ ಹಿಂದೆ ನಾಲ್ಕು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು ಇದರೊಂದಿಗೆ ಕೇರಳದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದು ಇತರ ರಾಜ್ಯಗಳಿಗೂ ಎಚ್ಚರಿಕೆ ಗಂಟೆಯಾಗಿದ್ದು ಕೇರಳದ ಗಡಿ ಹೊಂದಿಕೊಂಡಿರುವ ರಾಜ್ಯಗಳು ಭಾರಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಅದರಲ್ಲೂ ಕರ್ನಾಟಕಕ್ಕೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ ಗಡಿ ಭಾಗದಲ್ಲಿ ಭಾರಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top