ಕನ್ನಡದ ಹೆಸರಾಂತ ಹಿರಿಯ ನಟಿ ಹೇಮಾ ಚೌಧುರಿ ಅನಾರೋಗ್ಯಕ್ಕೊಳಗಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪುಣ್ಯತಿಥಿಗೆ ಹೇಮಾ ಚೌಧರಿಯವರು ಬಂದಿದ್ದರು. ಅದಾದ ನಂತರ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯ ಉಂಟಾಗಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ.