ಪುತ್ತೂರು: ಹಿರಿಯ ವಾಗ್ಮಿ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ ಈ ಪುರಸ್ಕಾರ ಲಭಿಸಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ.
ಕೃಷಿಕರಾಗಿರುವ ತೋಳ್ಪಾಡಿಯವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರಾಗಿದ್ದು, ಕೆಲ ಕಾಲ ಬೆಂಗಳೂರಿನಲ್ಲಿ ವೈ.ಎನ್.ಕೆ., ಗೋಪಾಲಕೃಷ್ಣ ಅಡಿಗ, ಲಂಕೇಶ್ ಪತ್ರಿಕೆ, ಮುಂತಾದವರ ಒಡನಾಟವಿತ್ತು. ಕುಮಾರಧಾರೆಗೆ ಅಣೆಕಟ್ಟು ಕಟ್ಟುವುದು, ಸ್ಥಳೀಯ ರೈತರಿಗೆ ತೊಂದರೆಯಾದಾಗ ಕಿಸಾನ್ ಸಂಘದ ಮೂಲಕ ಪ್ರತಿಭಟಿಸುತ್ತಿದ್ದರು. ಸ್ವದೇಶಿ ಚಳುವಳಿಯಲ್ಲಿ ಭಾಗಿಯಾದವರು ತೋಳ್ಪಾಡಿಯವರು.