ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.
ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್ ಪಡ್ನೂರು ಮತ್ತಿತರರು ಉಪಸ್ಥಿತರಿದ್ದರು.