ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನವೀನ್ ಡಿ., ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಡಿ.10ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು. ಡಿ.20 ಬುಧವಾರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟು, ಸಹಕಾರ ಭಾರತಿ ತಾಲೂಕು ಅಧ್ಯಕ್ಷ ಕೃಷ್ಣ ಕುಮಾರ್, ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಾಳ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ಬಿಜೆಪಿ ಮಂಡಲ ಕಾರ್ಯದರ್ಶಿ ಪುರುಷೋತ್ತಮ್ ಮುಂಗ್ಲಿಮನೆ, ನಿತೀಶ್ ಶಾಂತಿವನ, ಮಂಡಲ ಉಪಾಧ್ಯಕ್ಷ ಮುಕುಂದ ಬಜತ್ತೂರು, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನರಿಮೊಗರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಧಾಕರ್ ಕುಲಾಲ್, ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.