ಪುತ್ತೂರು: ಡಿ.24 ಹಾಗೂ 25 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಕೇವಲ ಸ್ಥಳಾವಕಾಶ ನೀಡಿದ್ದೇವೆ ಹೊರತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಹಭಾಗಿತ್ವ ಇಲ್ಲ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು. ಸದಸ್ಯರು ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಗೌರವ ಸಲಹೆಗಾರರಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೇಶವ ಪ್ರಸಾದ್ ಮುಳಿಯ, ಅಧ್ಯಕ್ಷರು, ಸರ್ವ ಸದಸ್ಯರುಗಳು ವ್ಯವಸ್ಥಾಪನಾ ಸಮಿತಿ, ಅರ್ಚಕ ವೃಂದ, ನೌಕರ ವೃಂದ ಎಂದು ಸಮಿತಿ ಹಾಗೂ ಕಾರ್ಯನಿರ್ವಹಣಾಧಿಕಾರಿಯ ಗಮನಕ್ಕೆ ತಾರದೆ ಮುದ್ರಣಗೊಂಡ ಬಗ್ಗೆ ಗಮನಿಸಲಾಗಿದೆ.
ಧಾರ್ಮಿಕ ಆಚರಣೆ ಕಾರ್ಯಕ್ರಮದ ನಿಟ್ಟಿನಲ್ಲಿ ಸ್ಥಳಾವಕಾಶ ಒದಗಿಸಲಾಗಿದೆಯೇ ಹೊರತು ನಮ್ಮ ಸಹಭಾಗಿತ್ವ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.