ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆ ಹಿನ್ನಲೆಯಲ್ಲಿ ಎರಡು ಕ್ಷೇತ್ರಗಳಿಗೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಹಿಂದಿನ ಪ್ರಾಬಲ್ಯ ಮರಳಿ ಪಡೆಯುವ ಹಿನ್ನಲೆಯಲ್ಲಿ ಸ್ವತಃ ಸಂಸದ ನಳಿನ್ ಕುಮಾರ್ ಕಟೀಲ್ ಫೀಲ್ಡ್ ಗಿಳಿದಿದ್ದಾರೆ.
ಪುತ್ತೂರಿನಲ್ಲಿ ಭಾನುವಾರ ವಾರ್ಡ್ 11 ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಪರ ಫೀಲ್ಡಿಗಿಳಿದು ಬಿರುಸಿನ ಮತ ಯಾಚನೆ ಮಾಡಿದರು. ಮೊದಲಿಗೆ ಸ್ಥಳೀಯ ಬಿಜೆಪಿ ಮುಖಂಡರ ಜತೆಗೆ ಬ್ರಹ್ಮನಗರ ದುರ್ಗಾ ಮಾರಿಯಮ್ಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಾರ್ಡ್ 1 ರಲ್ಲಿ ಕಬಕ ಬಿಜೆಪಿ ಅಭ್ಯರ್ಥಿ ಸುನೀತಾ ಅವರ ಗೆಲುವಿಗಾಗಿ ಕಲ್ಲೇಗ ಕಲ್ಲುರ್ಟಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರ ಜತೆ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ಚಂದ್ರಶೇಖರ ರಾವ್ ಬಪ್ಪಳಿಗೆ, ಗೋಪಾಲಕೃಷ್ಣ ಹೇರಳೆ, ಆರ್.ಸಿ.ನಾರಾಯಣ, ಸೀತಾರಾಮ ರೈ ಕೆದಂಬಾಡಿಗುತ್ತು, ಸಾಜ ರಾಧಾಕೃಷ್ಣ ಆಳ್ವ ಸಹಿತ ಹಲವಾರು ಮಂದಿ ಇದ್ದರು.