ಮೂಡಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಮನೋಜ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಸ್ನಾನಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದವನಾಗಿದ್ದು, ಪೋಷಕರಿಗೆ ಮಾಹಿತಿ ನೀಡಲಾಗಿದೆ. ಮನೋಜ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಪೋಷಕರು ಮೂಡಬಿದಿರೆಗೆ ದೌಡಾಯಿಸಿದ್ದು, ತಾವು ಬರುವವರೆಗೂ ಶವ ಹೊರ ತೆಗೆಯದಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.