ಸುಬ್ರಹ್ಮಣ್ಯ: ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಾರಿಸುದಾರರು ಇದ್ದಲ್ಲಿ ಸಂಪರ್ಕಿಸುವಂತೆ ಕಡಬ ಠಾಣೆ ಪ್ರಕಟಣೆ ನೀಡಿದೆ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಸೈಲ್ವೇ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿ ಅಸ್ವಸ್ಥನಾಗಿ ಬಿದ್ದುಕೊಂಡಿದ್ದನ್ನು ಗಮನಿಸಿ 108 ಅಂಬುಲೆನ್ಸ್ ನಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದು, ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು 30-35 ವರ್ಷ ಪ್ರಾಯದ 7 ಫೀಟ್ ಎತ್ತರ, ಕೋಲು ಮುಖ, ಗೋದಿ ಮೈಬಣ್ಣ, ಕಪ್ಪು ಬಿಳಿ ಮಿಶ್ರಿತ ಕೂದಲು ಹೊಂದಿದ್ದು, ಸಿಮೆಂಟ್ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.
ಶವವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು, ಶವದ ಗುರುತು ಪತ್ತೆಗೆ ಕಡಬ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.