ಸುಬ್ರಹ್ಮಣ್ಯ: ದಿನನಿತ್ಯ ಸಾವಿರಾರು ಭಕ್ತಾದಿಗಳು ಬರುವ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ 24 * 7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪ್ರಸ್ತುತ ಇರುವ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರವಾಗಿ ವಿವರಿಸಿ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಅಗತ್ಯ ಆರೋಗ್ಯ ಸೇವೆಗಾಗಿ ಕಷ್ಟ ಪಡುವಂತಾಗಿದೆ. ಈ ನಿಟ್ಟಿನಲ್ಲಿ ಕುಕ್ಕೆಗೆ ಅಗತ್ಯವಾಗಿ 24*7 ಸೇವೆಯನ್ನು ಒದಗಿಸುವ ಸುಸಜ್ಜಿತ ಆಸ್ಪತ್ರೆಯ ಅಗತ್ಯತೆ ಇದೆ ಎಂದರು.
ಮನವಿ ಸ್ವೀಕರಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಈ ಕೂಡಲೇ ಸ್ಪಂದಿಸಿ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಾದವ ದೇವರಗದ್ದೆ ಉಪಸ್ಥಿತರಿದ್ದರು.