ಪುತ್ತೂರು: ಹಲವಾರು ದಶಕಗಳಿಂದ ಹಿಂದೂ ಸಾಮಾಜದ ಜಾಗೃತಿಯ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿರುವುದರ ಕುರಿತು ಕೇಸು ದಾಖಲಿಸಿರುವುದಕ್ಕೆ ಬಜರಂಗದಳ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿ ಭಾಷಣ ಮಾಡಿದ್ದು ಆದರೆ ಇದನ್ನೆ ಅಸ್ತ್ರವಾಗಿ ಬಳಸಿಕೊಂಡು ಮುಸ್ಲಿಂ ಓಲೈಕೆಗಾಗಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಲಾಖೆಗಳನ್ನು ಬಳಸಿಕೊಂಡು ಪ್ರಭಾಕರ್ ಭಟ್ ಅವರ ಮೇಲೆ ಕೇಸು ದಾಖಲಿಸುವ ಮೂಲಕ ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಮಾಡುತ್ತಿದೆ.
ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ .ಡಾ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಹಾಕಿರುವ ಕೇಸನ್ನು ವಾಪಸು ಪಡೆಯಬೇಕೆಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹಿಸಿದ್ದಾರೆ.