ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಮಂಗಳವಾರ ಕಡಬ ಹೊಸಮಠದಲ್ಲಿ ನಡೆಯಿತು.

ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿ ಆಶೀರ್ವನ ನೀಡಿದರು. ಶ್ರೀ ಅದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದರು.
ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ :
ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಅದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಕಡಬದಿಂದ ಹೊಸಮಠದ ತನಕ ಬೆಳ್ಳಿರಥದಲ್ಲಿ ಮಹಿಳೆಯರ ಪೂರ್ಣಕುಂಭ ಸ್ವಾಗತ, ಸ್ತಬ್ಧ ಚಿತ್ರದೊಂದಿಗೆ ಮೆರವಣಿಗೆ ಮೂಲಕ ಕರೆತರಲಾಯಿತು. ಸಭಾ ವೇದಿಕೆಯಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳು, ವಲಯ ಉಪಾಧ್ಯಕ್ಷರು ಶಾಲು, ಏಲಕ್ಕಿ ಮಾಲೆ, ತುಳಸಿ ಮಾಲೆ, ಸ್ಮರಣಿಕೆ ನೀಡಿ ಗೌರವಾರ್ಪಣೆ ಸಲ್ಲಿಸಿದರು.

ನೂತನ ಪದಾಧಿಕಾರಿಗಳ ಪದಗ್ರಹಣ :
ಈ ಸಂದರ್ಭದಲ್ಲಿ ನೂತನವಾಗಿ ಕಡಬದಲ್ಲಿ ಅಸ್ಥಿತ್ವಕ್ಕೆ ಬಂದ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಗೋಪಾಲಕೃಷ್ಣ ಗೌಡ ಪುಯಿಲ, ಅಧ್ಯಕ್ಷ ಸುರೇಶ್ ಗೌಡ ಬೈಲು, ಉಪಾಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಚೋಡಿ, ಕೋಶಾಧಿಕಾರಿ ಶಿವಪ್ರಸಾದ್ ಗೌಡ ಪುತ್ತಿಲ, ಸಂಘಟನಾ ಕಾರ್ಯದರ್ಶಿ ಶಿವರಾಮ ಗೌಡ ಏನೆಕಲ್ಲು, ಕಾರ್ಯದರ್ಶಿ ಮಂಜುನಾಥ ಗೌಡ ಕೋಲಂತ್ತಾಡಿ, ವಲಯಾವಾರು ಉಪಾಧ್ಯಕ್ಷರಾದ ದಯಾನಂದ ಗೌಡ ಆಲಡ್ಕ, ವೆಂಕಟ್ರಾಜ್ ಗೌಡ ಕೋಡಿಬೈಲ್, ಗೋಪಾಲಕೃಷ್ಣ ಗೌಡ ಪಟೇಲ್, ವಾಡ್ಯಪ್ಪ ಗೌಡ ಎರ್ಮಾಯಿಲ್, ರಾಧಾಕೃಷ್ಣ ಗೌಡ ಕೆರ್ನಡ್ಕ, ಧರ್ಮಪಾಲ ಗೌಡ ಕಣ್ಕಲ್ ಅವರಿಗೆ ಗುರುತಿನ ಚೀಟಿ ತೊಡಿಸುವ ಮೂಲಕ ಶ್ರೀ ಸ್ವಾಮೀಜಿಯವರು ಪದಗ್ರಹಣ ನೆರವೇರಿಸಿದರು.
ಲೋಗೋ-ವೆಬ್‍ಸೈಟ್ ಅನಾವರಣ:
ಒಕ್ಕಲಿಗರ ಸಂಪ್ರದಾಯಿಕ ಆಯುಧ ಹಾಗೂ ಕೃಷಿ ಸಂಬಂಧಿತ ಸಲಕರಣೆಗಳನ್ನೊಳಗೊಂಡ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಲೋಗೊವನ್ನು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ವೆಬ್‍ಸೈಟ್ ನ್ನು ಅನಾವರಣ ಮಾಡಲಾಯಿತು.

ಸಾಂಸ್ಕೃತಿಕ ವೈಭವ :
ಕಾರ್ಯಕ್ರಮದ ಅಂಗವಾಗಿ ವಿದುಷಿ ಪ್ರಮೀಳಾ ಲೋಕೇಶ್‍ನೇತೃತ್ವದ ನೃತ್ಯ ನಿನಾದ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಸಮಾರಂಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಯ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಸಹಕಾರಿ ಧುರೀಣ ಮಾಧವ ಗೌಡ ಜಾಕೆ, ಮಂಗಳೂರು ವಿಜಿಯಸ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲೋಕಯ್ಯ ಗೌಡ, ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪದ್ಮ ಗೌಡ ಬೆಳಾಲು, ಕೊಡಗು, ದ.ಕ. ಗೌಡ ಅಭಿವೃದ್ಧಿ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಾಜಿ ಅಧ್ಯಕ್ಷ ಎಂ.ಪಿ.ಉಮೇಶ್, ಕರ್ನಾಟಕ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಮಂಗಳೂರು ಒಕ್ಕಲಿಗ ಸೇವಾ ಸಂಘದ ಕಾರ್ಯದರ್ಶಿ ಡಿ.ಬಿ.ಬಾಲಕೃಷ್ಣ ಗೌಡ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ವಿಟ್ಲ ಗೌಡರ ಯಾನೆ ಒಕ್ಕಲಿಗರ ಗೌರವ ಸಲಹೆಗಾರ ಲಿಂಗಪ್ಪ ಗೌಡ ಅಳಿಕೆ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಬೆಳ್ತಂಗಡಿ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳ ತಾಲೂಕು ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಮೋನಪ್ಪ ಗೌಡ, ಬೆಳ್ತಂಗಡಿ ತಾಲೂಕು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ, ಮಂಗಳೂರು ಒಕ್ಕಲಿಗ ಯಾನೆ ಗೌಡ ಸೇವಾ ಸಂಘದ ಅಧ್ಯಕ್ಷ ಗುರುದೇವ್‍ಗೌಡ, ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ, ಪುತ್ತೂರು ಒಕ್ಕಲಿಗ ಸ್ವಸಹಾಯ ಸಂಘದ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ ಗೌಡ, ಕಡಬ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಅಧ್ಯಕ್ಷ ಕೇಶವ ಗೌಡ ಅಮೈ, ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ಪೂಯಿಲ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಚೋಡಿ, ಖಜಾಂಚಿ ಶಿವಪ್ರಸಾದ್ ಗೌಡ ಪುತ್ತಿಲ, ಉಪಾಧ್ಯಕ್ಷ ತಮ್ಮಯ್ಯ ಗೌಡ, ಸಂಘಟನಾ ಕಾರ್ಯದರ್ಶಿ ಶಿವರಾಮ ಗೌಡ ಏನೆಕಲ್ಲು, ಕಾರ್ಯದರ್ಶಿ ಮಂಜುನಾಥ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ರಮೇಶ್ ಗೌಡ ಕೊಲ್ಲೆಸಾಗು, ಪ್ರಧಾನ ಕಾರ್ಯದರ್ಶಿ ಲಾವಣ್ಯ ಹೇಮಂತ್ ಮಂಡೆಕರ, ತಾಲೂಕು ಯುವ ಘಟಕದ ಅಧ್ಯಕ್ಷ ಬಿ.ಎಂ.ಪೂರ್ಣೇಶ್ ಗೌಡ ಬಾಬ್ಲುಬೆಟ್ಟು ಬಲ್ಯ, ಪ್ರಧಾನ ಕಾರ್ಯದರ್ಶಿ ಸುಧೀಶ್ ಗೌಡ ಪಟ್ಟೆ ಉಪಸ್ಥಿತರಿದ್ದರು.
ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸಂಘಟನಾ ಕಾರ್ಯದರ್ಶಿ ಶಿವರಾಮ ಗೌಡ ಏನೆಕಲ್ಲು ಸ್ವಾಗತಿಸಿದರು. ಉಪಾಧ್ಯಕ್ಷ ತಮ್ಮಯ್ಯ ಗೌಡ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ, ಉಪನ್ಯಾಸಕಿ ಸುಶ್ಮಿತಾ ಆದಿತ್ಯ ಚಿದ್ಗಲ್ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ವಿವಿಧ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ನಾಯಕರು, ವಿವಿಧ ಸಮಾಜದ ಮುಖಂಡರು ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು.