ಬೆಂಗಳೂರು: ಮುಸ್ಲಿಂ ಮಹಿಳೆಯರನ್ನು ನಿಂದಿಸಿದ ಪ್ರಕರಣದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಮೇಲ್ ಪ್ರಕರಣ ದಾಖಲಾಗಿದ್ದು, ಇದೀಗ ಮಧ್ಯಂತರ ಜಾಮೀನು ಮಂಜೂರಾಗಿದೆ.
ಈ ಕುರಿತು ಹಿರಿಯ ವಕೀಲ, ಕರ್ನಾಟಕ ಮಾಜಿ ಎಎಜೆ ಅರುಣ್ ಶ್ಯಾಮ್ ಮಾಹಿತಿ ನೀಡಿದ್ದಾರೆ.
ಡಿ.24 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಪ್ರಭಾಕರ್ ಭಟ್ ನಿಂದನಾತ್ಮಕ ಆರೋಪ ಎದುರಿಸುತ್ತಿದ್ದಾರೆ.