ಪುತ್ತೂರು:ವಿಷ ಪದಾರ್ಥ ಸೇವಿಸಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ.
ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿ ರತ್ನಾಕರ ಭಂಡಾರಿ ಮೃತಪಟ್ಟವರು.
ತಾಲೂಕಿನ ಹೊರವಲಯದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕರಾಗಿರುವ ರತ್ನಾಕರ ಭಂಡಾರಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರತ್ನಾಕರ ಭಂಡಾರಿ ಅವರು ಕುಂಬ್ರ ವಲಯ ಸವಿತಾ ಸಮಾಜದ ಅಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ.