ಕಡಬ: ಅಮಾಯಕ ಬಾಲಕಿ ಸೌಜನ್ಯಾ ಅತ್ಯಾಚಾರಕ್ಕೊಳಪಟ್ಟು ಕೊಲೆಗೀಡಾಗಿ 11 ವರ್ಷಗಳೇ ಕಳೆದರೂ ನ್ಯಾಯ ಸಿಗದಿರುವುದು ನಾಗರಿಕ ಸಮಾಜದ ಎಲ್ಲರೂ ತಲೆ ತಗ್ಗಿಸುವಂತಹ ವಿಚಾರ. ಆ ನಿಟ್ಟಿನಲ್ಲಿ ಇಡೀ ಸಮಾಜ ಒಂದಾಗಿ ನ್ಯಾಯ ಸಿಗುವ ತನಕ ವಿರಮಿಸಬಾರದು ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಕರೆ ನೀಡಿದರು.
ಅವರು ರವಿವಾರ ಕಡಬ ತಾಲೂಕಿನ ಮರ್ದಾಳದಲ್ಲಿ ಸೌಜನ್ಯಾ ಪರ ಹೋರಾಟ ಸಮಿತಿಯ ನೇತೃತ್ವದಲ್ಲಿ ಜರಗಿದ ಪ್ರತಿ‘ಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಒಂದು ನ್ಯಾಯವೂ ಕೂಡ ಉಳ್ಳವರ ಪರವಾಗಿಯೇ ಇದೆ ಎನ್ನುವ ಭಾವನೆ ಜನರಲ್ಲಿ ಬರುವಂತಾಗಿದೆ. ಆ ಭಾವನೆ ಅಳಿಸಿ ಹೋಗಬೇಕಾದರೆ ಸೌಜನ್ಯಾ ಸಾವಿಗೆ ಸೂಕ್ತ ನ್ಯಾಯ ಸಿಗಬೇಕು ಎಂದು ಅವರು ಆಗ್ರಹಿಸಿದರು.
ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಮಾತನಾಡಿ, ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಗದೇ ಹೋದರೆ ಜನರು ದಂಗೆ ಏಳುವ ಪರಿಸ್ಥಿತಿ ಎದುರಾಗಬಹುದು. ಒಕ್ಕಲಿಗ ಗೌಡ ಸಂಘ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದೆ. ಮುಂದೆಯೂ ನೀಡಲಿದೆ ಎಂದು ಭರವಸೆ ನೀಡಿದರು.
ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ, ಸೌಜನ್ಯಾ ತಾಯಿ ಕುಸುಮಾವತಿ, ನ್ಯಾಯವಾದಿ ಮೋಹಿತ್ ಕುಮಾರ್, ತುಳು ವಿಮರ್ಶಕ ತಮ್ಮಣ್ಣ ಶೆಟ್ಟಿ, ನೀತಿ ತಂಡದ ಜಯಂತ್ ಟಿ. ಮುಂತಾದವರು ಮಾತನಾಡಿದರು. ಪ್ರತಿ‘ಟನ ಸಮಿತಿಯ ಮುಂದಾಳು ರಾಮಚಂದ್ರ ಮಂಡೆಕರ ಉಪಸ್ಥಿತರಿದ್ದರು. ಹೋರಾಟ ಸಮಿತಿಯ ವತಿಯಿಂದ ಮುಂದಿನ ಹೋರಾಟದಲ್ಲಿ ಸಕ್ರಿಯ ಬೆಂಬಲ ನೀಡುವಂತೆ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರಿಗೆ ಸಂಘಟಕರು ಮನವಿ ಸಲ್ಲಿಸಿದರು. ಹೋರಾಟ ಸಮಿತಿಯ ಅ‘ಕ್ಷ ಸರ್ವೋತ್ತಮ ಗೌಡ ಪಂಜೋಡಿ ಸ್ವಾಗತಿಸಿ, ಶರತ್ ರೈ ಕರ್ಮಾಯಿ ವಂದಿಸಿದರು. ಸುಬ್ರಹ್ಮಣ್ಯ ಸಿ.ಕೆ. ಐವರ್ನಾಡು ಹಾಗೂ ಮಂಜುನಾಥ ಗೌಡ ಕೋಲಂತಾಡಿ ನಿರೂಪಿಸಿದರು.