ಪುತ್ತೂರು: ನಗರದ ಹೊರವಲಯದ ಮುಕ್ರಂಪಾಡಿಯಲ್ಲಿ ಆಕ್ಟಿವಾ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ನಡೆದಿದೆ.
ಅಪಘಾತದ ಪರಿಣಾಮ ಕೆಲವರಿಗೆ ಗಾಯಗಳಾಗಿವೆ ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಆಕ್ಟಿವಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
























