ಅಯೋಧ್ಯೆ ಟ್ರಸ್ಟ್ ಹೆಸರಿನಲ್ಲಿ ವಂಚಕರಿಂದ ಜನರಿಗೆ ಮೋಸ: ವಿ.ಹೆಚ್.ಪಿ.

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಜನರನ್ನು ವಂಚಿಸುತ್ತಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ಆರೋಪಿಸಿದೆ. ಟ್ರಸ್ಟ್ ನ ಅನುಮತಿ ಇಲ್ಲದೇ ದೇಣಿಗೆ ಸಂಗ್ರಹಿಸುವ ಮೂಲಕ ಹಲವು ವ್ಯಕ್ತಿಗಳು ವಂಚನೆ ಮಾಡುತ್ತಿದ್ದಾರೆ. ಈ ವಿಷಯವನ್ನು ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತರಲಾಗಿದ್ದು, ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಹೆಚ್ ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್, ಮಂದಿರ ಟ್ರಸ್ಟ್ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಇಂತಹ ವಂಚಕರ ಬಗ್ಗೆ ಎಚ್ಚರದಿಂದ ಇರಲು ಜನತೆಗೆ ಮನವಿ ಮಾಡಿದ್ದಾರೆ. ಅವರು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥರಿಗೆ ಕಳುಹಿಸಿದ ದೂರನ್ನು ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರ ಪ್ರತಿಯನ್ನು ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೂ ಕಳಿಸಲಾಗಿದೆ.

‘ಎಚ್ಚರ! ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಹೊಂದಿರುವವರು ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ವಿಎಚ್‌ಪಿ ವಕ್ತಾರ ಬನ್ಸಾಲ್ ತಿಳಿಸಿದ್ದಾರೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರತ್ಯೇಕ ಸಮಿತಿ ರಚಿಸಲು ಮತ್ತು ಹಣವನ್ನು ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ವಿಎಚ್‌ಪಿ ಇತ್ತೀಚೆಗೆ ಹೇಳಿತ್ತು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top