ಪುತ್ತೂರು: ಡಿಸೆಂಬರ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗದಲ್ಲಿ ನಡೆಸಿದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಆಯಿಷತ್ ಹಿಬಾ ಮತ್ತು ನಿರೀಕ್ಷಾ ಎಚ್. ಪ್ರಥಮ ಸ್ಥಾನ ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.