ಪುತ್ತೂರು: ಸ್ವ- ನಿಧಿಯಿಂದ ಸಮೃದ್ಧಿ ಮೇಳ ಮತ್ತು ಮೈ ಬೀ ಡಿಜಿಟಲ್ ಶಿಬಿರ ಜ. 5ರಂದು ಬೆಳಿಗ್ಗೆ 11 ಗಂಟೆಯಿಂದ ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ.
ನಗರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿ ಆಯ್ಕೆಯಾದ ಫಲಾನುಭವಿಗಳಿಗೆ ಮತ್ತು ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ.
ಶಿಬಿರದಲ್ಲಿ ಪಿಎಂ ಸುರಕ್ಷಾ ವಿಮಾ ಯೋಜನೆ, ಪಿಎಂ ಜೀವನ ಜ್ಯೋತಿ ವಿಮಾ ಯೋಜನೆ, ಪಿಎಂ ಜನ್ ಧನ್ ಯೋಜನೆ, ಪಿಎಂ ಕ್ರಮ ಯೋಗಿ ಮಾನ್ ಧನ್ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ, BoCW ಅಡಿಯಲ್ಲಿ ನೋಂದಣಿ, ಜನನಿ ಸುರಕ್ಷಾ ಯೋಜನೆ ಮತ್ತು ಪಿಎಂ ಮಾತೃ ವಂದನಾ ಯೋಜನೆಗಳ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಶಿಬಿರ ಆಯೋಜಿಸಲಾಗಿದೆ.
ಸಂಬಂಧಿಸಿದ ಯೋಜನೆಗಳಿಗೆ ಆಯ್ಕೆಯಾದ ಫಲಾನುಭವಿಗಳು ಮತ್ತು ಕುಟುಂಬದ ಸದಸ್ಯರು ಸೂಕ್ತ ದಾಖಲೆಗಳೊಂದಿಗೆ ಭಾಗವಹಿಸಿ ಈ ಕಾರ್ಯಕ್ರಮದ ಪ್ರಯೋಜನೆ ಪಡೆಯುವಂತೆ ಪ್ರಕಟಣೆ ತಿಳಿಸಿದೆ.