ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿ ಪ್ರಮುಖರನ್ನೊಳಗೊಂಡು ಹಿಂದೆ ರಚಿಸಿದ್ದ ಸಮಿತಿಯನ್ನು ರದ್ದುಗೊಳಿಸಿ, ಇದೀಗ ಹೊಸದಾಗಿ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯ ಸಮಿತಿಗೆ ಕಾಂಗ್ರೆಸ್ ಮುಖಂಡರಾದ ಹೆಚ್. ಆದಂ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ.ವರ್ಗೀಸ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರು ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಹೊಸ ಸಮಿತಿ ರಚಿಸಿ ಆದೇಶಿಸಲಾಗಿದೆ.
ಸಮಿತಿಯಲ್ಲಿ ತಹಶೀಲ್ದಾರ್ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಕಂದಾಯ ಇಲಾಖೆಯ ಪೀಠಾಧಿಕಾರಿ ಮುತ್ತುರಾಜು ಎಂ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























