ಪುತ್ತೂರು: ಪುತ್ತೂರಿನಲ್ಲಿ ಪೌರ ಸನ್ಮಾನ ಸ್ವೀಕರಿಸಲು ಗುರುವಾರ ಸಂಜೆ ಪುತ್ತೂರಿಗೆ ಆಗಮಿಸಲಿರುವ ಪುತ್ತಿಗೆ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರಿ ಸುಶ್ರೀಂದ್ರ ತೀರ್ಥ ಸ್ವಾಮೀಜಿಗಳು ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ರಾತ್ರಿ ಭೇಟಿ ನೀಡಿದರು.

ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ದೇವಸ್ಥಾನದಲ್ಲಿ ಪಟ್ಟದ ದೇವರಿಗೆ ‘ತೊಟ್ಟಿಲು ಪೂಜೆ ಸೇವೆ’ ನೆರವೇರಿಸಿ, ಆಶೀರ್ವಚನ ನೀಡಿದರು. ಭಕ್ತಾದಿಗಳು ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿಕೊಂಡ ಹರಿಪ್ರಸಾದ್ ವೈಲಾಯ ಕರಾಯ ಹಾಗೂ ಮನೆಯವರು, ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು, ಬ್ರಹ್ಮಕಲಶ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.