ಉದ್ಘಾಟನೆಗೆ ಸಜ್ಜಾಗಿ ನಿಂತಿರುವ ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ತಿರುಪತಿ ತಿರುಮಲ ದೇಗುಲದಿಂದ ಸುಮಾರು 1 ಲಕ್ಷ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ತಿರುಪತಿಯ ವೆಂಕಟೇಶ್ವರ ದೇವಸ್ಥಾನದ ಅಧಿಕೃತ ಪಾಲಕರಾದ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗೆ ಒಂದು ಲಕ್ಷ ಲಡ್ಡುಗಳನ್ನು ಪೂರೈಸಲಿದೆ ಎಂದು ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರವಾಸಿಗರಿಗೆ ವಿತರಿಸಲು ತಲಾ 25 ಗ್ರಾಂ ತೂಕದ ಒಂದು ಲಕ್ಷ ಲಡ್ಡುಗಳನ್ನು ನೀಡಲು ಟಿಟಿಡಿ ಒಪ್ಪಿಗೆ ನೀಡಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.