ಪ್ರತೀ ವಲಯಕ್ಕೆ ಹೆಚ್ಚುವರಿಯಾಗಿ  20 ಲಕ್ಷ ರೂ. ಅನುದಾನ | ಬ್ಲಾಕ್‍ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ರೂ. ಅನುದಾನ ಹೆಚ್ಚುವರಿಯಾಗಿ ನೀಡುವುದಾಗಿ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಪುತ್ತೂರು ಬ್ಲಾಕ್‍ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತೀ ವಲಯಾಧ್ಯಕ್ಷರುಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ. ಗ್ರಾಮದಲ್ಲಿ ಅಗತ್ಯವಾಗಿ ಆಗಬೇಕಾದ ಕಾಮಗಾರಿಯನ್ನು ಮಾಡಲು ಈ ಅನುದಾನವನ್ನು ಬಳಕೆ ಮಾಡಲಾಗುತ್ತದೆ. ಪ್ರತೀ ಗ್ರಾಮಗಳಿಗೂ ಸಮಾನ ರೀತಿಯಲ್ಲಿ ಅನುದಾನವನ್ನು ವಿತರಣೆ ಮಾಡಲಾಗುತ್ತದೆ. ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೂ ಶಾಸಕರ ಕಚೇರಿಗೆ ಬನ್ನಿ. ಪಕ್ಷ ಕಟ್ಟುವಲ್ಲಿ ಆಗಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ಪಕ್ಷ ಕಟ್ಟಲು ಏನು ಸಹಕಾರ ಬೇಕು ‌ಎಂಬುದನ್ನು ನೇರವಾಗಿ ತಿಳಿಸಿ ಎಂದ ಅವರು,  ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತೀ ಮನೆಗೂ ತಲುಪುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು. ಗೃಹಲಕ್ಷ್ಮಿ ಯಾರಿಗೆ ಬಂದಿಲ್ಲವೋ ಅಂಥವರಿಗೆ ತಲುಪಿಸುವ ವ್ಯವಸ್ಥೆಯನ್ನು ಕಾರ್ಯಕರ್ತರು ಮಾಡಬೇಕು. ಪಕ್ಷದ ಬಲವರ್ಧನೆಗೆ ಗ್ಯಾರಂಟಿ ಯೋಜನೆಗಳು, ಅಕ್ರಮ ಸಕ್ರಮ, 94 ಸಿ ಮತ್ತು ಸಿ ಸಿ ವಿತರಣೆಯಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಅರ್ಹ ಎಲ್ಲರಿಗೂ ಹಕ್ಕು‌ಪತ್ರವನ್ನು ನೀಡಲಾಗಿದೆ ಎಂದು‌ ತಿಳಿಸಿದರು.































 
 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ವಲಯ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ ಮಾಹಿತಿ ನೀಡಿದರು. ತಿಂಗಳಲ್ಲಿ ಎರಡು ದಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರು ಅಹವಾಲು ಸ್ವೀಕರಿಸಬೇಕು. ಕಾರ್ಯಕರ್ತರ ಭಾವನೆಗೆ ಧಕ್ಕೆ‌ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು.

ಸಭೆಯಲ್ಲಿ ಸಭೆಯಲ್ಲಿ ಬ್ಲಾಕ್‍ ಕಾಂಗ್ರೆಸ್ ಮಾಜಿ ಅಧ್ಯಕ್ಷ ನ್ಯಾಯವಾದಿ ಫಝಲ್ ರಹೀಂ, ಅಲ್ಪ‌ಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಕೆಪಿಸಿಸಿ ಸಂಯೋಜಕ ಚಂದ್ರಹಾಸ ಶೆಟ್ಟಿ, ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಕೆಯ್ಯೂರು ವಲಯ ಅಧ್ಯಕ್ಷ ಎ.ಕೆ. ಜಯರಾಮ ರೈ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಎಸ್ ಸಿ ಘಟಕದ ಪ್ರಮುಖರಾದ ಮುಕೇಶ್ ಕೆಮ್ಮಿಂಜೆ, ಮಸ್ಕರೇನಸ್, ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್, ಬ್ಲಾಕ್ ಕಾರ್ಯದರ್ಶಿ ಅಮಲರಾಮಚಂದ್ರ, ಜಯಲಕ್ಷ್ಮಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top