ಸುಳ್ಯ : ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಕಿಡಿಗೇಡಿಗಳು ಹರಿದಿದ್ದು, ಅವರನ್ನು ತಕ್ಷಣ ಬಂಧಿಸಬೇಕು ಎಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.
ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ, ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಅದರಲ್ಲಿ ನಡುವಿನಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯವನ್ನು ಯಾರೋ ಕಿಡಿಗೇಡಿಗಳು ರಾತ್ರಿ ಹರಿದು ಹಾಕಿದ್ದಾರೆ. ಹಿಂದೂಗಳ ಭಾವನೆ ಜೊತೆ ಆಟವಾಡುವ ಇಂತಹ ರಾಮವಿರೋಧಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಇಲ್ಲದಿದ್ದರೆ ಹಿಂದೂ ಸಮಾಜ ಹೋರಾಟಕ್ಕಿಳಿಯಬೇಕಾದಿತು ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.