ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ 2023 24’ ಪೆರ್ನಾಜೆ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾದ್ವಿ ಶ್ರೀ ಮಾತಾ ನಂದಮಯೀ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಪಸರಿಸಲಿ ಎಂದು ನುಡಿದರು.
ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಂಸ್ಥೆಯ ಶೈಕ್ಷಣಿಕ ಕಾರ್ಯದರ್ಶಿ ಯು ಶಿವಶಂಕರ ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸೀತಾರಾಘವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪೆರ್ನಾಜೆ ಶಂಕರನಾರಾಯಣ ಭಟ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಈಶ್ವರಮಂಗಲ ಶ್ರೀ ಗಜಾನನ ವಿದ್ಯಾಸಂಸ್ಥೆಗಳ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ನೂಜಾಲ ಸುಬ್ರಮಣ್ಯ ಭಟ್ ನಂದ ಗೋಕುಲ, ಸಂಸ್ಥೆಯ ಸಂಚಾಲಕಿ ಅನುಪಮಾ ಭಟ್ ಉಪಸ್ಥಿತರಿದ್ದರು.
ಆಡಳಿತ ಕಾರ್ಯದರ್ಶಿ ಕೊಚ್ಚಿ ಕೃಷ್ಣ ಪ್ರಸಾದ್ ಪ್ರಾಸ್ತವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ಎಸ್ ನಾರಾಯಣ ಭಟ್ ಸಂಸ್ಥಾಪಕರ ಕುರಿತು ಸoಸ್ಮರಣೆ ಮಾಡಿದರು. ನಿವೃತ್ತ ಶಿಕ್ಷಕ ಪಟ್ಟಾಜೆ ಸುಬ್ರಹ್ಮಣ್ಯ ಭಟ್ ನಿವೃತ್ತ ಉಪನ್ಯಾಸಕಿ ಕುರಿತು ಮಾತನಾಡಿದರು, ಆಡಳಿತ ಮಂಡಳಿಯ ನಿರ್ದೇಶಕಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ಅಭಿನಂದನಾ ಪತ್ರವನ್ನು ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲ ಮಂಟ್ಯಯ್ಯ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುಜಾತ ವರದಿ ವಾಚಿಸಿದರು..ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಪಿ. ವಂದಿಸಿದರು. ನಿವೃತ್ತ ಪ್ರಾಂಶುಪಾಲ ಶಾಮಣ್ಣ ಕೆ. ಮನೋರಂಜನ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ. ಕಾರ್ಯಕ್ರಮ ನಿರೂಪಿಸಿದರು.