ಸುಳ್ಯ ಬ್ಯಾನರ್ ಹರಿದ ಪ್ರಕರಣ | ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

ಸುಳ್ಯ : ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಸುಳ್ಯ ಜಾತ್ರೆ ಹಾಗೂ ಅಯೋಧ್ಯೆ ರಾಮಮಂದಿರ ಮತ್ತು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಇದನ್ನು ಯಾರೋ ಕಿಡಿಗೇಡಿಗಳು ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯದ ಬ್ಯಾನ‌ರ್ ನ್ನು ಹರಿದು ಹಾಕಿದ್ದಾರೆ.

ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ. ಅವರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಈ ಕೃತ್ಯವೆಸಗಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top