ಸುಳ್ಯ: ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಲುವಾಗಿ ಹಾಕಲಾದ ಬ್ಯಾನರ್ ನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದು, ಆರೋಪಿಗಳನ್ನು ಪೊಲೀಸ್ ಇಲಾಖೆ ಮುಂದಿನ 24 ಗಂಟೆಯೊಳಗೆ ಬಂಧಿಸದಿದ್ದರೆ ಪ್ರತಿಭಟನೆ ಮಾಡಲಿದ್ದೇವೆ ಎಂದು ಬಜರಂಗದಳ ಸುಳ್ಯ ನಗರ ಸಂಚಾಲಕರು ವರ್ಷಿತ್ ಚೊಕ್ಕಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 10.00 ಗಂಟೆಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೇವೆ.
ಬ್ಯಾನರ್ ಹರಿಯುವ ಮೂಲಕ ಈ ರೀತಿಯ ವಿಕೃತಿ ಮರೆದು ಶಾಂತಿ ಭಂಗ ಉಂಟುಮಾಡುಲು ಹೊರಟಿರುವ ದುಷ್ಟ ಶಕ್ತಿಗಳನ್ನು ಪೊಲೀಸ್ ಇಲಾಖೆ ಯಾರ ಒತ್ತಡಗಳಿಗೆ ಮಣಿಯದ ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.