ಪುತ್ತೂರು: ಸರಕಾರಿ ಶಾಲೆಗಳು ಎಲ್ಲವನ್ನೂ ಕಲಿಸುತ್ತದೆ, ಗುಣಮಟ್ಟದ ಶಿಕ್ಷಣವೂ ಇದೆ ಜೊತೆಗೆ ಏನೇ ಸಂಕಷ್ಟ ಬಂದರೂ ಬದುಕುವ ಧೈರ್ಯವನ್ನು ಸರಕಾರಿ ಶಾಲಾ ಶಿಕ್ಷಣ ನೀಡುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸಬೇಕಾಗುತ್ತದೆ. ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕೊರತೆ ಇದೆ. ಅದನ್ನು ಮುಂದಿನ ದಿನಗಳಲ್ಲಿ ನೀಗಿಸುವ ಕೆಲಸ ನಡೆಯಲಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಎರಡು ಗ್ರಾಮಕ್ಕೊಂದು ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಶಾಲಾ ಸ್ಥಾಪಕ ತಿಮ್ಮಣ್ಣ ರೈ ಆನಾಜೆ, ಧೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಗ್ರಾಪಂ ಸದಸ್ಯರಾದ ಗ್ರೆಟ್ಟಾ ಜೆನೆಟಾ ಡಿಸೋಜಾ, ಅವಿನಾಶ್ ರೈ, ಬಾಲಚಂದ್ರ ಕೆ, ಗ್ರಾಪಂ ಮಾಜಿ ಸದಸ್ಯ ಬಾಲಚಂದ್ರ ರೈ ಆನಾಜೆ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುಮಾ ಶಶಿಪೂಜಾರಿ, ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ ಉಪಸ್ಥಿತರಿದ್ದರು.
ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.