ಸುಳ್ಯ: ಪ್ರೊ. ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ನ್ಯಾಯಾಲಯಕ್ಕೆ ಶೂರಿಟಿ ಕೊಟ್ಟ ಬಳಿಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಬಿಡುಗಡೆಯಾಗಲಿದ್ದು, ಮಂಗಳವಾರ ಬಿಡುಗಡೆ ಆಗಲಿದ್ದಾರೆ ಎಂದು ಹೇಳಲಾಗಿದೆ.
ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು ಹೈಕೋರ್ಟ್ನಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದರು. ಕಳೆದ ಅಕ್ಟೋಬರ್ 5ರಂದು ಆಕಾಶ ಭವನ ಶರಣ್ ಹೊರತುಪಡಿಸಿ ಡಾ. ರೇಣುಕಾ ಪ್ರಸಾದ್ ಮತ್ತು ಇತರ ಆರೋಪಿಗಳ ಬಂಧನವಾಗಿತ್ತು.
ಮೂರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಎಲ್ಲಾ ಬಂಧಿತರಿಗೂ ಜಾಮೀನು ದೊರೆತಿರುವುದಾಗಿ ತಿಳಿದು ಬಂದಿದೆ.