ಪುತ್ತೂರು: ಶ್ವಾಸಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಆಕ್ಸಿಜನ್ ಯಂತ್ರ ನೀಡಿದರು.
ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆರ್ಥಿಕವಾಗಿ ತೀರ ಬಡತನದಲ್ಲಿರುವ ಅವರಿಗೆ ಆಕ್ಸಿಜನ್ ಯಂತ್ರ ಖರೀದಿಸಲು ಹಣಕಾಸಿನ ಅಡಚಣೆಯಾಗಿತ್ತು. ತನ್ನ ಸಂಕಷ್ಟವನ್ನು ಕಳೆದ ಮೂರು ದಿನಗಳ ಹಿಂದೆ ಶಾಸಕರ ಬಳಿ ಹೇಳಿಕೊಂಡಿದ್ದರು. ಆಕ್ಸಿಜನ್ ಯಂತ್ರ ಕೊಡಿಸುವ ಭರವಸೆ ನೀಡಿದ್ದ ಶಾಸಕರು ಮೂರು ದಿನದೊಳಗೆ ಅದನ್ನು ಸಂತ್ರಸ್ಥ ಮಹಿಳೆಗೆ ವಿತರಿಸಿದ್ದಾರೆ.
ಈ ಸಂದರ್ಭದಲ್ಲಿ ಅಳಿಕೆ ಗ್ರಾ.ಪಂ. ಅಧ್ಯಕ್ಷ ಪದ್ಮನಾಭ ಪೂಜಾರಿ ಉಪಸ್ಥಿತರಿದ್ದರು.