ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!!

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

ಸಾಮೂಹಿಕ ಅಂತ್ಯಸಂಸ್ಕಾರ: 

ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು. 































 
 

ಪರಿಹಾರ: 

ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top