ಕಾವು: ಇಲ್ಲಿನ ಪುತ್ತಿಲ ಪರಿವಾರದ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನೆರವೇರಿಸಲಾಯಿತು.
ನೇತೃತ್ವ ವಹಿಸಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಗೌರವ ಸ್ವೀಕರಿಸಿ ಮಾತನಾಡಿ, ನಾವು ಒಗ್ಗಟ್ಟಿನಿಂದ ನಡೆಸುವ ಧಾರ್ಮಿಕ ಕಾರ್ಯಕ್ರಮಗಳು ಹಿಂದೂ ಸಮಾಜಕ್ಕೆ ಶಕ್ತಿಯನ್ನು ತುಂಬುತ್ತವೆ. ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹಿಂದುಗಳಲ್ಲಿ ಜಾಗೃತಿಯೂ ಮೂಡುತ್ತದೆ. ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕೇಂದ್ರ ಕಚೇರಿ ಅಧ್ಯಕ್ಷರು, ಪದಾಧಿಕಾರಿಗಳು, ಕಾವು ಘಟಕದ ಪದಾಧಿಕಾರಿಗಳು, ಸದಸ್ಯರು ಮೊದಲಾದವರು ಭಾಗವಹಿಸಿದ್ದರು.