ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.

ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು.

ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವನದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ. ನಾನು ಕೂಡ ಪ್ರಶಸ್ತಿ ಪಡೆಯಬೇಕೆಂಬ ಕನಸು ನನ್ನದಾಗಿತ್ತು. ಇದೀಗ ನನಗೂ ಪ್ರಶಸ್ತಿ ಸಿಕ್ಕಿರುವುದು ಸಂತಸ ನೀಡಿದೆ’ ಎಂದು ಕ್ರಿಕೆಟಿಗ ಶಮಿ ಎಎನ್‌ಐಗೆ ತಿಳಿಸಿದ್ದಾರೆ.































 
 

ವಿಶ್ವಕಪ್ 2023 ರಲ್ಲಿ ಮೊದಲಿಗೆ ಮೊಹಮ್ಮದ್ ಶಮಿ ಅವರನ್ನು ನಾಲ್ಕು ಪಂದ್ಯಗಳಿಂದ ಹೊರಗಿಡಲಾಗಿತ್ತು. 19ರಂದು ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು ಗಾಯಗೊಂಡ ಬಳಿಕ ಶಮಿ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದಿದ್ದರು. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಪರ 5 ವಿಕೆಟ್‌ಗಳನ್ನು ಪಡೆದು ಗೆಲುವಿಗೆ ಕಾರಣರಾಗಿದ್ದರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ಅಂದರೆ 24 ವಿಕೆಟ್‌ಗಳನ್ನು ಗಳಿಸಿ ಬೇಷ್ ಎನ್ನಿಸಿಕೊಂಡಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top