ಬಳ್ಪ: ಬಳ್ಪ-ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ಹಾಗೂ ಗ್ರಾಮ ಉತ್ಸವ ಸಮಿತಿ ವತಿಯಿಂದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ-2024 ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು.

ಸಂಸದ ನಳಿನ ಕುಮಾರ್ ಕಟೀಲ್ ಅವರು ಅಡಕೆ ಟ್ರಾಲಿಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಆಶಯವಾಗಿ ಬಳ್ಪ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಅತೀ ಹೆಚ್ಚುನ ಅನುದಾನ ಬಳಕೆಯ ಗ್ರಾಮವಾಗಿ ಬಳ್ಪ ಗ್ರಾಮ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕಾರ್ಯಕ್ರಮದಲ್ಲಿ ಬಾಲಕೃಷ್ಣ ರೈ, ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಿ ಪಿ.ಡಿ., ಎಪಿಎಂಸಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್, ಹಲವಾರು ಗಣ್ಯರು ಪಾಲ್ಗೊಂಡಿದ್ದರು.
ಕೃಷಿ ವಿಜ್ಞಾನಿ ಭವಿಷ್, ಮಾಧವ, ಹರ್ಷಿತ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮೂವೆ ಮತ್ತಿತರರು ಪಾಲ್ಗೊಂಡಿದ್ದರು.