ಜನವರಿ 26ರಂದು ದಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ.
ಗಣರಾಜ್ಯೋತ್ಸವದ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ.
ಕಳೆದ ವರ್ಷವೂ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಚುನಾವಣಾ ವರ್ಷವಾಗಿದ್ದರಿಂದಾಗಿ ಅದು ರಾಜಕೀಯ ಸ್ವರೂಪವನ್ನು ಪಡೆದುಕೊಂಡಾಗ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರದ ಪ್ರಮುಖ ನಾಯಕರು ಕೇಂದ್ರದ ಮೇಲೆ ಒತ್ತಡ ತಂದು, ಮೆರವಣಿಗೆಯಲ್ಲಿ ರಾಜ್ಯದ ಸ್ತಬ್ದ ಚಿತ್ರ ಭಾಗವಹಿಸಲು ಅನುಮತಿ ಪಡೆದುಕೊಂಡಿದ್ದರು.