ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ನರಿಂಗಾನ ನಿವಾಸಿ, ಸಿದ್ದೀಕ್ ಕೆ.ಎಂ. ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಯಾವುದೇ ದಾಖಲೆ ಪತ್ರ ಇಲ್ಲದಿದ್ದುದರಿಂದ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಜ.8 ರಂದು ರಾತ್ರಿ ವಿಟ್ಲ ಠಾಣಾ ಎ.ಎಸ್.ಐ ಜಯರಾಮ ಹಾಗೂ ಸಿಬ್ಬಂದಿಗಳಾದ ಪುನೀತ್, ಹೇಮರಾಜ್, ಅಶೋಕ್ ರವರು ಬಂಟ್ವಾಳ ತಾಲೂಕು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ದಸ್ತಗಿರಿ ಮಾಡಿರುತ್ತಾರೆ. ಸಿದ್ದೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯ 11 ಸಾವಿರ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ.