ಪುತ್ತೂರು: ಬಲ್ನಾಡು ಗ್ರಾಮದ ಬುಳೇರಿಕಟ್ಟೆ-ಸಾಜ ಕುದ್ದುಪದವು ಲೋಕೋಪಯೋಗಿ ರಸ್ತೆಗೆ ಗುದ್ದಲಿ ಪೂಜೆ ನಡೆಯಿತು.
1.80 ಕೋಟಿ ರೂ ವೆಚ್ಚದಲ್ಲಿ ಡಾಮರೀಕರಣಕ್ಕೆ ಶಾಸಕರು ಅನುದಾನ ಬಿಡುಗಡೆ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಬಲ್ನಾಡು ಕಾಂಗ್ರೆಸ್ ವಲಯಾಧ್ಯಕ್ಷ ಚಂದಪ್ಪ ಪೂಜಾರಿ, ಬಲ್ನಾಡು ಬೂತ್ ಅಧ್ಯಕ್ಷ ನವೀನ್ ಕರ್ಕೆರ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಬುಳೇರಿಕಟ್ಟೆ ಪ್ರಕಾಶ್ ಚಂದ್ರ ಆಳ್ವ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ಶರೀಫ್ ರೋಯಲ್,ಬೂತದ ಅಧ್ಯಕ್ಷ ಕೆ ಬಿ ಆಶ್ರಫ್, ಗ್ರಾಪಂ ಮಾಜಿ ಸದಸ್ಯ ಇದ್ದಿಕುಂಞಿ, ಜಗನ್ನಾಥ ರೈ, ಅಶೋಕ್ ಪಣೆತ್ತಡ್ಕ, ಇಲ್ಯಾಸ್ ಮಲ್ತಿಕಲ್ಲು, ಸಂಜೀವ ಪೂಜಾರಿ, ಜತ್ತಪ್ಪ ಪೂಜಾರಿ, ಕುಂಞಿ ಸಾರ್ಯ, ಉಮೇಶ್ ಪಣೆತ್ತಡ್ಕ, ಚನಿಯಪ್ಪ ಕೂಟೇಲು, ಹಮೀದ್ ಸಾಜ, ಅಬ್ದುಲ್ ರಹಿಮಾನ್ ಸಾರ್ಯ, ಸಂಜೀವ ಸಾರ್ಯ ಮೊದಲಾದವರು ಉಪಸ್ಥಿತರಿದ್ದರು.