ಕಡಬ: ಯುವತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕ ಎಂಬವರ ಪುತ್ರಿ ತೃಪ್ತಿ ಮೃತಪಟ್ಟ ಯುವತಿ
ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ತೃಪ್ತಿ ಎರಡು ದಿನಗಳಿಂದ ಅನಾರೋಗ್ಯದಿಂದಿದ್ದು, ಗುರುವಾರ ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.