ಬೆಳ್ತಂಗಡಿ: ಪಕ್ಕದ ಮನೆಗೆ ಹೋದ ಬಾಲಕ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯ ಪಣಕಜೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಮೊಹಮ್ಮದ್ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾಸ್ (7) ಮೃತಪಟ್ಟ ಬಾಲಕ.
ಎರಡನೇ ತರಗತಿ ವಿದ್ಯಾರ್ಥಿಯಾಗಿರುವ ಅನಾಸ್ ಇಂದು ಪಕ್ಕದ ಮನೆಗೆ ಆಟವಾಡಲು ತೆರಳಿದ್ದ, ಅಲ್ಲಿರುವ ಕಟ್ಟೆ ಇಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ. ಮನೆಯವರು ತಕ್ಷಣ ಮಗುವನ್ನು ಬಾವಿಯಿಂದ ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದಾಗಲೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.