ಬೆಳಂದೂರು: ಬೆಳಂದೂರು ಗ್ರಾಮ ಪಂಚಾಯಿತಿ ಹಾಗೂ ಪುತ್ತೂರು ಯೂನಿಯನ್ ಬ್ಯಾಂಕ್ ಇಂಡಿಯಾ ವತಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜ.17 ಬುಧವಾರ ಮಧ್ಯಾಹ್ನ 2 ಗಂಟೆಗೆ ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿದೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೃಷಿಕರಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ವೀಡಿಯೋ ಪ್ರಸಾರಗೊಳ್ಳಲಿದೆ. ಅಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜೀವನ್ ಜ್ಯೋತಿ ಭೀಮಾ ಯೋಜನೆ, ಉಜ್ವಲ ಗ್ಯಾಸ್ ಯೋಜನೆ ಸಹಿತ ಇನ್ನಿತರ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಮಾಡಿಕೊಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.