ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಪಂಜ, ಪಿಲಿಗುಂಡದ ಯಮುನಾ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಮಿಸಿ ಕೊಡುವ ಹೊಸ ಮನೆಗೆ ಗುದ್ದಲಿ ಪೂಜೆ ಇಂದು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಶಶಿಧರ್, ಜ್ಞಾನವಿಕಾಸ ಕಾರ್ಯಕ್ರಮದಡಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ನಿರ್ಗತಿಕರಿಗೆ ವಾತ್ಸಲ್ಯ ಮನೆ ರಚನೆ ಮಾಡಿಕೊಡುವುದು ಮಾತೃಶ್ರೀ ಅಮ್ಮನವರ ಒಂದು ಉತ್ತಮವಾದ ಯೋಜನೆ. ಇದೀಗ ಈ ಮನೆ ಆದಷ್ಟು ಬೇಗ ಪೂರ್ಣಗೊಂಡು ಮನೆಯವರು ಹೊಸ ಮನೆಯಲ್ಲಿ ನೆಮ್ಮದಿಯ ಜೀವನ ನಡೆಸಲಿ ಎಂದರು.
ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಬಲ್ನಾಡು ವಲಯದ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಬಲ್ನಾಡು ವಲಯಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ, ಮಾಜಿ ವಲಯಧ್ಯಕ್ಷ ಅಂಬ್ರೋಸ್ ಡಿಸೋಜಾ, ಕುಂಜೂರುಪಂಜ ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ, ಜ್ಞಾನವಿಕಾಸ ಸಮನ್ವಯಧಿಕಾರಿ ಕಾವ್ಯಶ್ರೀ , ಬಲ್ನಾಡು ಶೌರ್ಯ ವಿಪತ್ತು ಘಟಕದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ಗ್ರಾಮಸ್ಥರು ಮನೆಯ ಸದಸ್ಯರು ಉಪಸ್ಥಿತರಿದ್ದರು.