ಪುತ್ತೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಟೈಲರಿಂಗ್ ತರಬೇತಿ ಕಾರ್ಯಕ್ರಮ ಕೊಡಿಪ್ಪಾಡಿಯಲ್ಲಿ ನಡೆಯಿತು.
ಕೊಡಿಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಪ್ಪ ಪೂಜಾರಿ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಆರ್ಮಿ ಆಫೀಸರ್ ಜಯರಾಮ್ ಗೌಡ, ಕೊಡಿಪ್ಪಾಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧೀರಜ್ ಗೌಡ, ಕಾರ್ಯದರ್ಶಿ ಮನೋಹರ್ ಕೊಳಕಿಮಾರ್, ಜನಜಾಗ್ರತಿ ಗ್ರಾಮ ಸಮಿತಿ ಅಧ್ಯಕ್ಷ ಹರಿಕೃಷ್ಣ ಗೌಡ ಗುತ್ತು, ಬಲ್ನಾಡ್ ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಒಕ್ಕೂಟದ ಅಧ್ಯಕ್ಷ ದಿನೇಶ್ ಗೌಡ ಗೋಮುಖ, ಉಪಾಧ್ಯಕ್ಷ ಎನ್. ರಾಧಾಕೃಷ್ಣ ಗೌಡ, ಟೈಲರಿಂಗ್ ತರಬೇತಿ ಶಿಕ್ಷಕಿ ವಸಂತಿ, ಒಕ್ಕೂಟದ ಕಾರ್ಯದರ್ಶಿ ಸುನೀತಾ, ಜ್ಞಾನವಿಕಾಸ ಸಮನ್ವಯಧಿಕಾರಿ ಕಾವ್ಯಶ್ರೀ, ಸೇವಾಪ್ರತಿನಿಧಿ ಚಿತ್ರ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
























