ವಿದ್ಯುತ್ ತಂತಿ ಸವರಿದ ಲಾರಿ | ರಸ್ತೆಗಡ್ಡವಾಗಿ ಬಿದ್ದ ಎರಡು ಕಂಬ : ವಿದ್ಯುತ್ ಪೂರೈಕೆ ಸ್ಥಗಿತ

ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿದ ಪರಿಣಾಮ ಎರಡು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ.

ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ, ಲಾರಿಯ ಚಾಲಕ ಮೇಲಿರುವ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ‌ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದುವರಿದಿದ್ದಾನೆ. ಪರಿಣಾಮ ತಂತಿಗಳೊಂದಿಗೆ ಎರಡು ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಈ ಸಂದರ್ಭ ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಹಾವೇರಿ ಮೂಲದ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸ್ಥಳಕ್ಕೆ ಮೆಸ್ಕಾಂ ಇಂಜಿನಿಯರ್, ವೇಣೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. . ಘಟನೆಯಿಂದಾಗಿ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top