ಪುತ್ತೂರು: ದ.ಕ. ಜಿಲ್ಲಾ ಮಟ್ಟದ ಯುವಜನ ಮೇಳ 2023-24 ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭ ಜ. 20 ಹಾಗೂ 21ರಂದು ಸವಣೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಜ. 20ರಂದು ಬೆಳಿಗ್ಗೆ 10ರಿಂದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಸಮಾರಂಭ ನಡೆಯಲಿದೆ. ಸಂಸದರು, ಶಾಸಕರು, ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಸದ್ಯರು, ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.
ಸುರೇಶ್ ರೈ ಸೂಡಿಮುಳ್ಳು ಅವರ ನೇತೃತ್ವ ವಹಿಸಿದ್ದು, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯಿತಿ, ಸವಣೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಆಶ್ರಯದಲ್ಲಿ ಯುವಜನ ಮೇಳ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.