ಪುತ್ತೂರು: ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಶ್ರೀ ರಾಮಶ್ವ ಯಾತ್ರೆಗೆ ಶುಕ್ರವಾರ ದೇವಸ್ಥಾನದ ರಥಬೀದಿಯಲ್ಲಿ ಚಾಲನೆ ನೀಡಲಾಯಿತು.
ಪುತ್ತೂರು ಸೀಮೆಗೆ ಸಂಬಂಧಿಸಿ ಮೂರು ದಿನಗಳ ಕಾಲ ಸಂಚರಿಸಲಿರುವ ಈ ಯಾತ್ರೆಯನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಡಾ.ಸುಧಾ ಎಸ್.ರಾವ್, ಬಿ.ಕೆ.ವೀಣಾ, ಕರಸೇವಕರಾದ ರಾಜೇಶ್ ಬನ್ನೂರು, ಸುರೇಂದ್ರ ಆಚಾರ್ಯ, ಪಿ.ಜಿ.ಚಂದ್ರಶೇಖರ್, ಪ್ರಧಾನ ಅರ್ಚಕ ವಸಂತ ಕೆದಿಲಾಯ, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಆರ್ ಎಸ್ ಎಸ್ ನ ರವೀಂದ್ರ, ಜನಾರ್ದನ ಬೆಟ್ಟ, ರಾಧಾಕೃಷ್ಣ ನಂದಿಲ, ಸುದರ್ಶನ್, ಜಯರಾಜ್ ಮತ್ತಿತರರು ಉಪಸ್ಥಿತರಿದ್ದರು. ವಿಶಾಖ್ ರೈ ಕಾರ್ಯಕ್ರಮ ನಿರ್ವಹಿಸಿದರು.