ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !!

ಬೆಳ್ತಂಗಡಿ: ಸರಕಾರಿ ಜಾಗದ ಒತ್ತುವರಿಯನ್ನು ತೆರವು ಗೊಳಿಸಲು ತೆರಳಿದ್ದ ತಹಶೀಲ್ದಾರರ ಮೇಲೆ ತಂಡವೊಂದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ  ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗ ಒತ್ತುವರಿಯಾಗಿರುವ ಕುರಿತು ಮಾಹಿತಿ ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆಂದು ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಜಾಗವನ್ನು ಅಕ್ರಮ ಮಾಡಿರುವ ನಸೀರ್ ಹಾಗೂ ರೌಫ್ ಎಂಬವರು ಸೇರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗವುಂಟುಮಾಡಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಬೆಳ್ತಂಗಡಿ ಪೊಲೋಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top