ಬಂಟ್ವಾಳ: ಜ.22 ರಂದು ಅಯೋಧ್ಯೆ ರಾಮಂದಿರದಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಮುನ್ನಾ ದಿನ ಭಾನುವಾರ ಜೀವನದಿ ನೇತ್ರಾವತಿ ನದಿ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಮಾಜಿ ಪುರಸಭೆ ಸದಸ್ಯ, ರಾಮಭಕ್ತ ಎ.ಗೊವಿಂದ ಪ್ರಭು ಎಂಬವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜಿಲ್ಲೆಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ ನದಿ ಮಧ್ಯೆ ಭಾನುವಾರ ರಾತ್ರಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪುರಸಭೆಯ ಹಿರಿಯ ಸದಸ್ಯ ಹಾಗೂ ಅಯೋಧ್ಯೆ ಕರಸೇವೆಯಲ್ಲಿ ಭಾಗಿಯಾಗಿದ್ದ ಗೋವಿಂದ ಪ್ರಭು,ನೇತ್ರಾವತಿ ನದಿಯ ನೀರಿನ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನಡೆಸಿದ್ದು ವಿಶೇಷ.
ನದಿಯ ನೀರಿನ ಮಧ್ಯೆ ತೆಪ್ಪದ ಮಾದರಿಯನ್ನು ರಚಿಸಿ ದೀಪಾರಾಧನೆಯ ಬೆಳಕಿನಲ್ಲಿ ಪೂಜೆ ನೆರವೇರಿತು. ಪೂಜೆ ನಡೆಯುವ ಪಕ್ಕದಲ್ಲೇ ನದಿಯಲ್ಲಿ ಶ್ರೀರಾಮನ ವಿಗ್ರಹ, ಆಂಜನೇಯನ ವಿಗ್ರಹಗಳು ಗಮನ ಸೆಳೆದಿತ್ತು.