ಆಲಂಕಾರು: ಮೂರು ಬಾರಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ 23ನೇ ನೂತನ ಆಲಂಕಾರು ಶಾಖೆಯ ಉದ್ಘಾಟನಾ ಸಮಾರಂಭ ಜ.21 ಭಾನುವಾರ ಕಡಬ ಶ್ರೀ ದುರ್ಗಾ ಟವರ್ಸ್‍ನಲ್ಲಿ ನಡೆಯಿತು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು.

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೊಠಡಿ, ಉದ್ಯಮಿ ಜಿ.ಕೃಷ್ಣಪ್ಪ ರಾಮಕುಂಜ ಗಣಕೀಕರಣ ಉದ್ಘಾಟಿಸಿದರು. ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲ ಗೌಡ ಪ್ರಥಮ ಠೇವಣಿ ಪತ್ರ, ಆಲಂಕಾರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಪ್ರಥಮ ಉಳಿತಾಯ ಖಾತೆ ಪುಸ್ತಕ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಕೆ. ಪ್ರಥಮ ಪಾಲುಪತ್ರ ಪುಸ್ತಕ ವಿತರಣೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಕಡಬ ಒಕ್ಕಲಿಗರ ಸಂಘದ ಅಧ್ಯಕ್ಷ ಸುರೇಶ್ ಬೈಲು, ಕಡಬ ಸ್ಪಂದನಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಅಮೈ, ಆಲಂಕಾರು ಶ್ರೀ ದುರ್ಗಾ ಟವರ್ಸ್ ಮಾಲಕ ರಾಧಾಕೃಷ್ಣ ರೈ ಪಾಲ್ಗೊಂಡು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ ವಹಿಸಿದ್ದರು. ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ, ಸಿಬ್ಬಂದಿಗಳು ಉಪಸ್ಥಿತರಿದ್ದರು.