ಸುಳ್ಯ: ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜದಲ್ಲಿ ನಡೆದಿದೆ.
ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಕಾಲವಿದರು.
ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ ನಾರಾಯಣ ನಾಯಕ್ ಅವರ ಮನೆಯಲ್ಲಿ ಮುಂಜಾನೆ ಬಾಗಿಲು ತೆರೆಯದಿರುವುದನ್ನು ಗಮನಿಸಿದ ಪಕ್ಷದ ಮನೆಯವರು ಮನೆ ಬಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದು, ಇಬ್ಬರಿಗೂ ವಿವಾಹವಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.