ಉಪ್ಪಿನಂಗಡಿ: ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ಅಯೋಧ್ಯ ಶ್ರೀ ರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ರಾಮ ತಾರಕ ಮಂತ್ರ ಜಪ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ರಿಂದ ಎಲ್.ಇ.ಡಿ. ಪರದೆಯಲ್ಲಿ ಅಯೋಧ್ಯೆ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ನಡೆಯಿತು.
ಇದೇ ಸಂದರ್ಭ ಕರಸೇವಕರಿಗೆ ಗೌರವಾರ್ಪಣೆ ನಡೆಯಿತು.